ಆದಿಕಾಂಡ 50:3 - ಕನ್ನಡ ಸತ್ಯವೇದವು C.L. Bible (BSI)3 ಪದ್ಧತಿಯ ಪ್ರಕಾರ ನಲವತ್ತು ದಿನಗಳು ಸುಗಂಧ ದ್ರವ್ಯಗಳನ್ನು ಲೇಪಿಸಬೇಕಾಗಿತ್ತು. ಅಷ್ಟು ದಿನಗಳವರೆಗೂ ಅವನಿಗೋಸ್ಕರ ಈಜಿಪ್ಟಿನವರಿಂದ ಶೋಕಾಚರಣೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವದರಿಂದ ಅಷ್ಟು ದಿವಸ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತ್ಯರು ಅವನಿಗೋಸ್ಕರ ಎಪ್ಪತ್ತು ದಿನಗಳವರೆಗೂ ಗೋಳಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ವೈದ್ಯರು ಇಸ್ರಾಯೇಲನಿಗೆ ನಲವತ್ತು ದಿನಗಳವರೆಗೆ ಸುಗಂಧದ್ರವ್ಯಗಳ ಲೇಪನ ಮಾಡಿದರು. ಅದಕ್ಕಾಗಿ ಅಷ್ಟು ಸಮಯ ಬೇಕಾಗಿತ್ತು. ಇದಲ್ಲದೆ ಈಜಿಪ್ಟಿನವರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು. ಅಧ್ಯಾಯವನ್ನು ನೋಡಿ |