Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:9 - ಕನ್ನಡ ಸತ್ಯವೇದವು C.L. Bible (BSI)

9 ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅವನ ಸಂಗಡ ರಥಗಳೂ ಕುದುರೆಗಳೂ ಸಹ ಹೋದವು. ಹೊರಟುಹೋದವರು ಬಹು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗಂಡಸರು ಯೋಸೇಫನೊಂದಿಗೆ ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಹೋದರು. ಅದು ಬಹಳ ದೊಡ್ಡ ಗುಂಪಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಥಗಳೂ, ರಾಹುತರೂ ಅವನ ಸಂಗಡ ಹೊರಟು ಹೋದರು. ಸಮೂಹವು ಬಹಳ ದೊಡ್ಡದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:9
10 ತಿಳಿವುಗಳ ಹೋಲಿಕೆ  

ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಫರೋಹನ ರಥವನ್ನೆಳೆವ ಹೆಣ್ಣುಕುದುರೆಗೆ ಹೋಲಿಸಿರುವೆ ನಾ ನಿನ್ನನು ಪ್ರಿಯಳೇ.


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು.


ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.


ಜೋಸೆಫನ ಮನೆಯವರೆಲ್ಲರು, ಅಣ್ಣತಮ್ಮಂದಿರು, ತಂದೆಯ ಮನೆಯವರೆಲ್ಲರು ಹೋದರು. ತಮ್ಮ ಮಡದಿಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಬಿಟ್ಟುಹೋದರು.


ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು