Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:12 - ಕನ್ನಡ ಸತ್ಯವೇದವು C.L. Bible (BSI)

12 ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವರು ಲೋಕವನ್ನು ನೋಡಿದಾಗ ಅದು ಕೆಟ್ಟುಹೋಗಿತ್ತು; ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:12
18 ತಿಳಿವುಗಳ ಹೋಲಿಕೆ  

ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.


ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”


ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.


ದೇವರು ಮತ್ತೆ ಹೇಳಿದ್ದೇನೆಂದರೆ - “ನಾನು ನಿಮ್ಮನ್ನೂ ನಿಮ್ಮ ಸಂಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಿಗೆ ಮಾಡುವ ಈ ಪ್ರತಿಜ್ಞೆಗೆ


ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು