ಆದಿಕಾಂಡ 6:13 - ಕನ್ನಡ ಸತ್ಯವೇದವು C.L. Bible (BSI)13 ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು. ಅಧ್ಯಾಯವನ್ನು ನೋಡಿ |