Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:14 - ಕನ್ನಡ ಸತ್ಯವೇದವು C.L. Bible (BSI)

14 ನೀನು ತುರಾಯಿಮರದಿಂದ ನಾವೆಯೊಂದನ್ನು ಮಾಡಿಕೊ; ಅದರ ತುಂಬ ಕೊಠಡಿಗಳಿರಲಿ; ಅದರ ಒಳಕ್ಕೂ ಹೊರಕ್ಕೂ ರಾಳಪದಾರ್ಥವನ್ನು ಹಚ್ಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ನಿನಗೋಸ್ಕರವಾಗಿ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ಕೋಣೆಗಳನ್ನು ಮಾಡು, ಅದರ ಒಳಭಾಗಕ್ಕೂ ಹೊರಭಾಗಕ್ಕೂ ರಾಳವನ್ನು ಹಚ್ಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:14
6 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.


ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು.


ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಅದನ್ನು ಹೀಗೆ ಮಾಡು: ಅದರ ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು