Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:18 - ಕನ್ನಡ ಸತ್ಯವೇದವು C.L. Bible (BSI)

18 ಆದರೆ ನಿನ್ನೊಡನೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ನೀನು ಹೆಂಡತಿ, ಮಕ್ಕಳು ಹಾಗೂ ಸೊಸೆಯರ ಸಮೇತ ನಾವೆಯನ್ನು ಹತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ನಿನ್ನ ಕೂಡ ನನ್ನ ನಿಬಂಧನೆಯನ್ನು ಮಾಡುತ್ತೇನೆ. ನೀನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ನಾನು ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀನು, ನಿನ್ನ ಸಂಗಡ ನಿನ್ನ ಮಕ್ಕಳು, ನಿನ್ನ ಹೆಂಡತಿ ಹಾಗೂ ಸೊಸೆಯರು ನಾವೆಯೊಳಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:18
11 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಆ ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಮಡದಿ, ಮಕ್ಕಳು, ಸೊಸೆಯರ ಸಮೇತ ನಾವೆಯನ್ನು ಹತ್ತಿದನು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಅದೇ ದಿನ ನೋಹನೂ ಅವನ ಹೆಂಡತಿಯೂ ಮತ್ತು ಶೇಮ್, ಹಾಮ್, ಯೆಫೆತ್ ಎಂಬ ಅವನ ಮಕ್ಕಳೂ ಅವರ ಮಡದಿಯರೂ ನಾವೆಯನ್ನು ಹೊಕ್ಕರು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.


ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲಪುರುಷನಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು