ಆದಿಕಾಂಡ 6:3 - ಕನ್ನಡ ಸತ್ಯವೇದವು C.L. Bible (BSI)3 ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು. ಅಧ್ಯಾಯವನ್ನು ನೋಡಿ |