Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:5 - ಕನ್ನಡ ಸತ್ಯವೇದವು C.L. Bible (BSI)

5 ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯರ ಕೆಟ್ಟತನವು ಭೂವಿುಯ ಮೇಲೆ ಹೆಚ್ಚಾಗಿರುವದನ್ನೂ ಅವರು ಹೃದಯದಲ್ಲಿ ಯೋಚಿಸುವದೆಲ್ಲವು ಯಾವಾಗಲೂ ಬರೀ ಕೆಟ್ಟದ್ದಾಗಿರುವದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:5
24 ತಿಳಿವುಗಳ ಹೋಲಿಕೆ  

ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಮಾನವರನು ದೇವ ಸ್ವರ್ಗದಿಂದ ಸಮೀಕ್ಷಿಸುತಿಹನು I ತನ್ನನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ದೇವರು ನನಗೆ, “ನೀನು ಒಳಹೊಕ್ಕು ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದು ಹೇಳಿದರು. ನಾನು ಹೊಕ್ಕು ನೋಡಿದೆ;


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?


ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು.


ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ನೀನು ಹಿಡಿದಿರುವುದು ಪುರಾತನ ಹಾದಿಯನೇ ದುರ್ಜನರು ನಡೆದುಬಂದ ಆ ಬೀದಿಯನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು