Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:9 - ಕನ್ನಡ ಸತ್ಯವೇದವು C.L. Bible (BSI)

9 ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:9
34 ತಿಳಿವುಗಳ ಹೋಲಿಕೆ  

ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ತದೇಕಚಿತ್ತದಿಂದಲ್ಲ.


ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು :


ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.


ಆತನಿಗೆ ಶೇಮ್, ಹಾಮ್ ಮತ್ತು ಯೆಫೆತ್ ಎಂಬ ಮೂರು ಮಂದಿ ಮಕ್ಕಳು.


ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.


ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ.


ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು