Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:11 - ಕನ್ನಡ ಸತ್ಯವೇದವು C.L. Bible (BSI)

11 ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-13 ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:11
27 ತಿಳಿವುಗಳ ಹೋಲಿಕೆ  

ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಆ ಸರದಾರನು, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದದ್ದರಿಂದ ದೈವಪುರುಷನು ಅವನಿಗೆ, “ನೀನು ಅದನ್ನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ನುಡಿದಿದ್ದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.


ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.


ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು.


ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.


ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ಗಣಿಯನ್ನು ತೋಡಿತೋಡಿ ಜನನಿವಾಸಿಗಳಿಗೆ ದೂರವಾಗಿ ಮೇಲ್ಗಡೆ ನಡೆದಾಡುವವರನ್ನು ಮರೆತುಹೋಗಿ ಅತ್ತಿತ್ತ ಅಲೆದಾಡುತ್ತಾರೆ ನರಲೋಕಕ್ಕೆ ಅನ್ಯರಾಗಿ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಜಲಪ್ರಳಯದಿಂದಲೇ ಅಂದಿನ ಜಗತ್ತು ಮುಳುಗಿ ನಾಶವಾಯಿತು.


ಭೂಮಿಯ ಮೇಲೆ ಜಲಪ್ರಳಯ ಬಂದಾಗ ನೋಹನಿಗೆ ಆರುನೂರು ವರ್ಷ.


ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.


ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?


ಆತನ ಜ್ಞಾನದಿಂದಲೆ ಅಡಿಸಾಗರ ಒಡೆಯುತ್ತದೆ ಆಕಾಶಮಂಡಲ ಇಬ್ಬನಿಯನ್ನು ಸುರಿಸುತ್ತದೆ.


ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.


ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಂದು ನೆಲವು ಪೂರ್ತಿಯಾಗಿ ಒಣಗಿತ್ತು.


ಯಾರಿಗಿದೆ ಮೋಡಗಳನು ಲೆಕ್ಕಿಸುವ ಶಕ್ತಿ? ಆಕಾಶದಲ್ಲಿನ ಬುದ್ದಲಿಗಳನು ಮೊಗಚಿಹಾಕುವ ಬುದ್ಧಿಶಕ್ತಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು