Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:12 - ಕನ್ನಡ ಸತ್ಯವೇದವು C.L. Bible (BSI)

12 ನಲವತ್ತು ದಿನವೂ ಹಗಲಿರುಳೆನ್ನದೆ ಭೂಮಿಯ ಮೇಲೆ ಬಿರುಮಳೆ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾಲ್ವತ್ತು ದಿನವೂ ಹಗಲಿರುಳು ಭೂವಿುಯ ಮೇಲೆ ದೊಡ್ಡ ಮಳೆ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಲವತ್ತು ದಿವಸ ಹಗಲಿರುಳು ಭೂಮಿಯ ಮೇಲೆ ದೊಡ್ಡ ಮಳೆ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:12
10 ತಿಳಿವುಗಳ ಹೋಲಿಕೆ  

ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


ಜಲಪ್ರಳಯಡ ಮಳೆ ನಲವತ್ತು ದಿನ ಭೂಮಿಯ ಮೇಲೆ ಒಂದೇ ಸಮನೆ ಸುರಿಯಿತು. ನೀರು ಹೆಚ್ಚುತ್ತಾ ನಾವೆಯನ್ನು ಮೇಲೆತ್ತಲು ಅದು ನೀರಿನ ಮೇಲೆ ತೇಲತೊಡಗಿತು.


ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


“ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.


ಜಲಪ್ರಳಯದಿಂದಲೇ ಅಂದಿನ ಜಗತ್ತು ಮುಳುಗಿ ನಾಶವಾಯಿತು.


ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು