Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:23 - ಕನ್ನಡ ಸತ್ಯವೇದವು C.L. Bible (BSI)

23 ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:23
21 ತಿಳಿವುಗಳ ಹೋಲಿಕೆ  

ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಜಲಪ್ರಳಯದಿಂದಲೇ ಅಂದಿನ ಜಗತ್ತು ಮುಳುಗಿ ನಾಶವಾಯಿತು.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ಬೀಳಬಹುದು ಸಾವಿರ ಹೆಣಗಳು ಪಕ್ಕದಲೆ I ಹತ್ತುಸಾವಿರ ಹೆಣಗಳು ನಿನ್ನ ಬಲಗಡೆಯಲೆ I ಅಂಥ ಕೇಡೊಂದೂ ಬಾರದು ನಿನ್ನ ಪಾಲಿಗೆ II


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ಅಂತೆಯೇ ನೋಹನು, ಮಡದಿ, ಮಕ್ಕಳು, ಸೊಸೆಯರ ಸಮೇತ ಹೊರಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು