Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:9 - ಕನ್ನಡ ಸತ್ಯವೇದವು C.L. Bible (BSI)

9 ಗಂಡುಹೆಣ್ಣುಗಳು ಜೋಡಿಜೋಡಿಯಾಗಿ ಬಂದು ನೋಹನೊಂದಿಗೆ ನಾವೆಯಲ್ಲಿ ಸೇರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗಂಡುಹೆಣ್ಣುಗಳು ಜೋಡಿಜೋಡಿಯಾಗಿ ಬಂದು ನೋಹನ ಬಳಿಗೆ ನಾವೆಯಲ್ಲಿ ಸೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೋಹನೊಂದಿಗೆ ನಾವೆಯೊಳಗೆ ಹೋದವು. ದೇವರ ಆಜ್ಞೆಯಂತೆ ಈ ಪ್ರಾಣಿಗಳು ಜೋಡಿಜೋಡಿಯಾಗಿ ನಾವೆಯೊಳಗೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ನೋಹನಿಗೆ ಆಜ್ಞಾಪಿಸಿದಂತೆಯೇ ಗಂಡುಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ನೋಹನೊಂದಿಗೆ ನಾವೆಯಲ್ಲಿ ಸೇರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:9
12 ತಿಳಿವುಗಳ ಹೋಲಿಕೆ  

ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.


ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.


ದೇವರ ಆಜ್ಞಾನುಸಾರ ಶುದ್ಧಾಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ


ಏಳು ದಿನಗಳಾದ ಬಳಿಕ ಜಲಪ್ರಳಯವಾಗತೊಡಗಿತು.


ತಮ್ಮತಮ್ಮ ಜಾತಿಗನುಸಾರ ಎಲ್ಲ ಜೀವಿಗಳು ಎರಡೆರಡಾಗಿ ಬಂದು ನಾವೆಯನ್ನು ಸೇರಿದವು.


ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು