Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:1 - ಕನ್ನಡ ಸತ್ಯವೇದವು C.L. Bible (BSI)

1 ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:1
35 ತಿಳಿವುಗಳ ಹೋಲಿಕೆ  

ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.


ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.


ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.


ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.


ಮರೆಯಬೇಡೆನ್ನನು ಪ್ರಭು, ನಿನ್ನ ಪ್ರಜೆಗೆ ದಯೆತೋರುವಾಗ I ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ II


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II


ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.


ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


“ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.


ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.


ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?


ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ.


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.


ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.


ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II


ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಒಂದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ.


ಆಶೀರ್ವದಿಸುವನು ಪ್ರಭು ಮರೆಯದೆ ನಮ್ಮನು I ಇಸ್ರಯೇಲ್ ವಂಶವನು, ಆರೋನನ ಕುಲವನು II


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು