Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:12 - ಕನ್ನಡ ಸತ್ಯವೇದವು C.L. Bible (BSI)

12 ಮತ್ತೆ ಏಳುದಿನಗಳಾದ ಮೇಲೆ ಇನ್ನೊಮ್ಮೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಈ ಸಾರಿ ಅದು ಹಿಂತಿರುಗಿ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತೇಳು ದಿವಸದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ತಿರಿಗಿ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಏಳು ದಿನಗಳ ನಂತರ ನೋಹನು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಆದರೆ ಅದು ಈ ಸಲ ಹಿಂತಿರುಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇನ್ನೂ ಏಳು ದಿನಗಳು ತಡೆದು, ಆ ಪಾರಿವಾಳವನ್ನು ಬಿಟ್ಟಾಗ, ಅದು ತಿರುಗಿ ಅವನ ಬಳಿಗೆ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:12
12 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಇನ್ನೂ ಏಳು ದಿವಸ ಕಾದು, ಪಾರಿವಾಳವನ್ನು ಹೊರಕ್ಕೆಬಿಟ್ಟನು.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು.


“ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು