Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:2 - ಕನ್ನಡ ಸತ್ಯವೇದವು C.L. Bible (BSI)

2 ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭೂವಿುಯ ಕೆಳಗಿರುವ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಹೋದವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಗ ಭೂವಿುಯ ಮೇಲಿದ್ದ ನೀರು ಕ್ರಮವಾಗಿ ತಗ್ಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:2
10 ತಿಳಿವುಗಳ ಹೋಲಿಕೆ  

ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.


ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ,


ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು.


ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ಯಾರಿಗಿದೆ ಮೋಡಗಳನು ಲೆಕ್ಕಿಸುವ ಶಕ್ತಿ? ಆಕಾಶದಲ್ಲಿನ ಬುದ್ದಲಿಗಳನು ಮೊಗಚಿಹಾಕುವ ಬುದ್ಧಿಶಕ್ತಿ?


ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.


ನಲವತ್ತು ದಿನವೂ ಹಗಲಿರುಳೆನ್ನದೆ ಭೂಮಿಯ ಮೇಲೆ ಬಿರುಮಳೆ ಸುರಿಯಿತು.


ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು