Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:21 - ಕನ್ನಡ ಸತ್ಯವೇದವು C.L. Bible (BSI)

21 ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:21
50 ತಿಳಿವುಗಳ ಹೋಲಿಕೆ  

ಹೌದು, ಉದ್ಧಾರದ ಮಾರ್ಗದಲ್ಲಿರುವವರಿಗೂ ವಿನಾಶಮಾರ್ಗದಲ್ಲಿರುವವರಿಗೂ ಕ್ರಿಸ್ತಯೇಸುವೇ ದೇವರಿಗರ್ಪಿಸಿದ ಪರಿಮಳದಂತೆ ನಾವು ಇದ್ದೇವೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.


ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ದುರುಳರು ದಾರಿತಪ್ಪಿದವರು ಉದರದಿಂದಲೆ I ಸಟೆಯಾಡುವ ಅಕ್ರಮಿಗಳವರು ಹುಟ್ಟಿನಿಂದಲೆ II


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


“ಆದರೆ ಅವರು, ‘ಇದೆಲ್ಲ ಹೇಳಿ ಏನು ಪ್ರಯೋಜನವಿಲ್ಲ; ನಾವು ನಮ್ಮ ಆಲೋಚನೆ ಪ್ರಕಾರ ನಡೆಯುತ್ತೇವೆ. ನಮ್ಮಲ್ಲಿ ಪ್ರತಿಯೊಬ್ಬರು ನಮ್ಮ ನಮ್ಮ ಹೃದಯದ ಚಟದಂತೆಯೇ ನಡೆಯುತ್ತೇವೆ’ ಎಂದು ಹೇಳುವರು.”


“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.


ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”


ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.


“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಆಮೇಲೆ ಮೋಶೆ ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಬಲಿಪೀಠದಲ್ಲಿ ದಹನಬಲಿ ದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನಬಲಿ, ಯಾಜಕಾಭಿಷೇಕ ಬಲಿಯಾಗಿತ್ತು.


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಸರ್ಪಗಳಂತಾ ಜನ ವಿಷಭರಿತ I ನಾಗರದಂತೆ ಅವರ ಕಿವಿ ಮಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು