ಆದಿಕಾಂಡ 8:9 - ಕನ್ನಡ ಸತ್ಯವೇದವು C.L. Bible (BSI)9 ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀರು ಭೂವಿುಯ ಮೇಲೆಲ್ಲಾ ಇರುವದರಿಂದ ಪಾರಿವಾಳವು ಕಾಲಿಡುವದಕ್ಕೆ ಸ್ಥಳವನ್ನು ಎಲ್ಲಿಯೂ ಕಾಣದೆ ತಿರಿಗಿ ನಾವೆಗೆ ಬಂತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |