ಆದಿಕಾಂಡ 9:15 - ಕನ್ನಡ ಸತ್ಯವೇದವು C.L. Bible (BSI)15 ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮುಂದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಳಯ ಬರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ನಾನು ನಿಮ್ಮನ್ನೂ ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಪ್ರತಿಜ್ಞೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಪ್ರಾಣಿಗಳನ್ನು ಹಾಳುಮಾಡುವ ಪ್ರಳಯವಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ. ಅಧ್ಯಾಯವನ್ನು ನೋಡಿ |