Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:16 - ಕನ್ನಡ ಸತ್ಯವೇದವು C.L. Bible (BSI)

16 ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲ ಜೀವಜಂತುಗಳಿಗೂ ಆದ ಶಾಶ್ವತ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುತ್ತೇನೆ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂವಿುಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:16
14 ತಿಳಿವುಗಳ ಹೋಲಿಕೆ  

ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಮನೆಯಲ್ಲಿ ಹುಟ್ಟಿದವನೇ ಆಗಿರಲಿ, ಕ್ರಯಕ್ಕೆ ಕೊಂಡುಕೊಂಡವನೇ ಆಗಿರಲಿ, ಪ್ರತಿ ಒಬ್ಬನಿಗೂ ತಪ್ಪದೆ ಸುನ್ನತಿಯಾಗಬೇಕು. ನಾನು ಮಾಡುವ ಒಡಂಬಡಿಕೆಯ ಗುರುತು ಹೀಗೆ ನಿಮ್ಮ ದೇಹದಲ್ಲಿ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಇದು ಅಲ್ಲದೆ ದೇವರು ನೋಹನಿಗೆ, “ನನಗೂ ಸಮಸ್ತ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು,” ಎಂದು ಹೇಳಿದರು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು