Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:18 - ಕನ್ನಡ ಸತ್ಯವೇದವು C.L. Bible (BSI)

18 ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಶೇಮ್, ಹಾಮ್, ಯೆಫೆತ್ ಎಂಬುವರು. (ಹಾಮನು ಕಾನಾನನ ತಂದೆ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಶೇಮ್ ಹಾಮ್ ಯೆಫೆತ್ ಎಂಬವರೇ (ಹಾಮನು ಕಾನಾನನ ತಂದೆಯು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೋಹನ ಗಂಡುಮಕ್ಕಳು ನೋಹನೊಡನೆ ನಾವೆಯೊಳಗಿಂದ ಹೊರಬಂದರು. ಅವರ ಹೆಸರುಗಳು: ಶೇಮ್, ಹಾಮ್ ಮತ್ತು ಯೆಫೆತ್ (ಹಾಮನು ಕಾನಾನನ ತಂದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾವೆಯೊಳಗಿಂದ ಹೊರಬಂದ ನೋಹನ ಪುತ್ರರು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:18
7 ತಿಳಿವುಗಳ ಹೋಲಿಕೆ  

ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು :


ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.


ಅವರಿಬ್ಬರು ಬಂದು ಹೊದಿಕೆಯನ್ನು ತೆಗೆದುಕೊಂಡು, ಬೆನ್ನಿನ ಹಿಂದೆ ಹಾಕಿಕೊಂಡು, ಹಿಂದುಹಿಂದಕ್ಕೆ ನಡೆದುಬಂದು ತಂದೆಗೆ ಅದನ್ನು ಹೊದಿಸಿ ಅವನ ಮಾನವನ್ನು ಕಾಪಾಡಿದರು. ಅವರಿಬ್ಬರು ಹಿಮ್ಮುಖರಾಗಿ ಇದ್ದುದರಿಂದ ತಂದೆ ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ.


ಲೆಮೆಕನ ಮಗ ನೋಹ, ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಜನ ಮಕ್ಕಳು ಇದ್ದರು.


ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ಇದು ಅಲ್ಲದೆ ದೇವರು ನೋಹನಿಗೆ, “ನನಗೂ ಸಮಸ್ತ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು