Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:19 - ಕನ್ನಡ ಸತ್ಯವೇದವು C.L. Bible (BSI)

19 ಜಗದಲ್ಲೆಲ್ಲ ಹರಡಿಕೊಂಡಿರುವ ಜನರು ನೋಹನ ಈ ಮೂರು ಮಕ್ಕಳಿಂದಲೇ ಉತ್ಪತ್ತಿಯಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಮೂವರು ನೋಹನ ಮಕ್ಕಳು; ಇವರಿಂದಲೇ ಭೂವಿುಯಲ್ಲೆಲ್ಲಾ ಹರಡಿಕೊಂಡಿರುವ ಜನರು ಉತ್ಪತ್ತಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಮೂವರು ನೋಹನ ಗಂಡುಮಕ್ಕಳು. ಭೂಮಿಯ ಮೇಲಿರುವ ಜನರೆಲ್ಲರಿಗೂ ಇವರೇ ಮೂಲಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:19
8 ತಿಳಿವುಗಳ ಹೋಲಿಕೆ  

ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.


ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.


ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ."


ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ.


ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು