Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:2 - ಕನ್ನಡ ಸತ್ಯವೇದವು C.L. Bible (BSI)

2 ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭೂವಿುಯ ಮೇಲಿರುವ ಎಲ್ಲಾ ಮೃಗಗಳೂ ಆಕಾಶದ ಎಲ್ಲಾ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಗಳೂ ಸಮುದ್ರದ ಮೀನುಗಳೂ ನಿಮಗೆ ಬೆದರಿ ಅಂಜಿಕೊಳ್ಳುವವು; ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:2
16 ತಿಳಿವುಗಳ ಹೋಲಿಕೆ  

ಸಕಲ ಜಾತಿಯ ಪ್ರಾಣಿಪಕ್ಷಿಗಳನ್ನೂ ಹರಿದಾಡುವ ಜಂತುಗಳನ್ನೂ ಜಲಜೀವಿಗಳನ್ನೂ ಮಾನವ ಪಳಗಿಸಬಲ್ಲನು; ಪಳಗಿಸಿಯೂ ಇದ್ದಾನೆ.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.


ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.


ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:


ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು