Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:22 - ಕನ್ನಡ ಸತ್ಯವೇದವು C.L. Bible (BSI)

22 ತನ್ನ ತಂದೆ ಬೆತ್ತಲೆಯಾಗಿರುವುದನ್ನು ಕಂಡ ಕಾನಾನನ ತಂದೆ ಹಾಮನು ಹೊರಗಿದ್ದ ಶೇಮ್, ಯೆಫೆತ್ ಸೋದರರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವದನ್ನು ಕಂಡು ಹೊರಗಿದ್ದ ಅಣ್ಣತಮ್ಮಂದಿರಾದ ಶೇಮ್ ಯೆಫೆತರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕಾನಾನನ ತಂದೆ ಹಾಮನು, ತನ್ನ ತಂದೆಯ ಬೆತ್ತಲೆತನವನ್ನು ನೋಡಿ, ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:22
17 ತಿಳಿವುಗಳ ಹೋಲಿಕೆ  

ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


“ಆಹಾಹಾ” ಎಂದೆನ್ನ ಜರೆಯುವವರು I ಬೆಂಗೊಟ್ಟು ಓಡಲಿ ಆ ಲಜ್ಜೆಗೆಟ್ಟವರು II


ಆಹಾ ಆಹಾ ಎಂದು ಹಾಸ್ಯ ಮಾಡುವವರು I ಅಕಟಕಟವೆನ್ನಲಿ ಹೇಸಿಗೆಯಿಂದಾ ನರರು II


ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.


ವ್ಯಾಜ್ಯವನ್ನು ನೆರೆಯವನ ಸಂಗಡವೆ ಚರ್ಚಿಸಿ ತೀರ್ಮಾನಿಸಿಕೊ; ನೆರೆಹೊರೆಯವರ ಗುಟ್ಟನ್ನು ಬಯಲು ಮಾಡಬೇಡ.


ಕೂಷ್, ಈಜಿಪ್ಟ್ (ಮಿಚ್ರಯಿಮ್), ಲಿಬ್ಯ (ಪೂಟ್), ಕಾನಾನ್‍ಗಳಲ್ಲಿರುವವರು ಹಾಮನ ವಂಶಜರು. ಇವೇ ಈ ಜನಾಂಗಗಳ ಮೂಲಪಿತೃಗಳ ಹೆಸರುಗಳು.


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


ಅವರಿಬ್ಬರು ಬಂದು ಹೊದಿಕೆಯನ್ನು ತೆಗೆದುಕೊಂಡು, ಬೆನ್ನಿನ ಹಿಂದೆ ಹಾಕಿಕೊಂಡು, ಹಿಂದುಹಿಂದಕ್ಕೆ ನಡೆದುಬಂದು ತಂದೆಗೆ ಅದನ್ನು ಹೊದಿಸಿ ಅವನ ಮಾನವನ್ನು ಕಾಪಾಡಿದರು. ಅವರಿಬ್ಬರು ಹಿಮ್ಮುಖರಾಗಿ ಇದ್ದುದರಿಂದ ತಂದೆ ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ.


ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು