Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:23 - ಕನ್ನಡ ಸತ್ಯವೇದವು C.L. Bible (BSI)

23 ಅವರಿಬ್ಬರು ಬಂದು ಹೊದಿಕೆಯನ್ನು ತೆಗೆದುಕೊಂಡು, ಬೆನ್ನಿನ ಹಿಂದೆ ಹಾಕಿಕೊಂಡು, ಹಿಂದುಹಿಂದಕ್ಕೆ ನಡೆದುಬಂದು ತಂದೆಗೆ ಅದನ್ನು ಹೊದಿಸಿ ಅವನ ಮಾನವನ್ನು ಕಾಪಾಡಿದರು. ಅವರಿಬ್ಬರು ಹಿಮ್ಮುಖರಾಗಿ ಇದ್ದುದರಿಂದ ತಂದೆ ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವರಿಬ್ಬರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂದ್ಹಿಂದಕ್ಕೆ ನಡೆದು ತಂದೆಗೆ ಹೊದಿಸಿ ಅವನ ಮಾನವನ್ನು ಕಾಪಾಡಿದರು; ಅವರು ಹಿಮ್ಮುಖರಾಗಿದ್ದದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತೆಗೆದುಕೊಂಡು, ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು, ಹಿಂಭಾಗವಾಗಿ ಹೋಗಿ, ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಮ್ಮುಖವಾಗಿದ್ದುದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:23
11 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ತನ್ನ ತಂದೆ ಬೆತ್ತಲೆಯಾಗಿರುವುದನ್ನು ಕಂಡ ಕಾನಾನನ ತಂದೆ ಹಾಮನು ಹೊರಗಿದ್ದ ಶೇಮ್, ಯೆಫೆತ್ ಸೋದರರಿಗೆ ತಿಳಿಸಿದನು.


ನೋಹನಿಗೆ ಅಮಲು ಇಳಿದ ಮೇಲೆ ತನ್ನ ಕಿರಿಯ ಮಗ ಮಾಡಿದ್ದು ತಿಳಿಯಿತು. ಆಗ ಅವನು ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು