Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:25 - ಕನ್ನಡ ಸತ್ಯವೇದವು C.L. Bible (BSI)

25 “ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನೋಹನು, “ಕಾನಾನನು ತನ್ನ ಸಹೋದರರಿಗೆಲ್ಲಾ ಕೀಳಾದ ಗುಲಾಮನಾಗಿರಲಿ” ಎಂದು ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:25
15 ತಿಳಿವುಗಳ ಹೋಲಿಕೆ  

ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.


“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ.


ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.


ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.


ತನ್ನ ತಂದೆ ಬೆತ್ತಲೆಯಾಗಿರುವುದನ್ನು ಕಂಡ ಕಾನಾನನ ತಂದೆ ಹಾಮನು ಹೊರಗಿದ್ದ ಶೇಮ್, ಯೆಫೆತ್ ಸೋದರರಿಗೆ ತಿಳಿಸಿದನು.


ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.


ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ


ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಶೇಮ್, ಹಾಮ್, ಯೆಫೆತ್ ಎಂಬುವರು. (ಹಾಮನು ಕಾನಾನನ ತಂದೆ).


ನೋಹನಿಗೆ ಅಮಲು ಇಳಿದ ಮೇಲೆ ತನ್ನ ಕಿರಿಯ ಮಗ ಮಾಡಿದ್ದು ತಿಳಿಯಿತು. ಆಗ ಅವನು ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು