Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:26 - ಕನ್ನಡ ಸತ್ಯವೇದವು C.L. Bible (BSI)

26 "ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ"

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಇನ್ನೂ ನುಡಿದದ್ದೇನಂದರೆ - ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲದೆ ನೋಹನು, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಕಾನಾನನು ಶೇಮನಿಗೆ ಗುಲಾಮನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:26
15 ತಿಳಿವುಗಳ ಹೋಲಿಕೆ  

ಇಂತಹ ಸಮೃದ್ಧಿ ಪಡೆದಿರುವ ಜನರು ಭಾಗ್ಯವಂತರು I ಯಾರಿಗೆ ದೇವರು ಪ್ರಭುವಾಗಿಹನೋ ಅವರು ಧನ್ಯರು II


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.


ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು