Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:27 - ಕನ್ನಡ ಸತ್ಯವೇದವು C.L. Bible (BSI)

27 "ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಫೆತನನ್ನು ದೇವರು ವಿಸ್ತರಿಸಲಿ. ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ. ಕಾನಾನನು ಅವರಿಗೆ ದಾಸನಾಗಿರಲಿ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ. ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:27
15 ತಿಳಿವುಗಳ ಹೋಲಿಕೆ  

ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”


ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.


ಜಲಪ್ರಳಯ ಮುಗಿದ ಮೇಲೆ ನೋಹನು 350 ವರ್ಷ ಬದುಕಿದ್ದನು.


ಯೆಫೆತನ ಮಕ್ಕಳು ಇವರು - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು