Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:5 - ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:5
26 ತಿಳಿವುಗಳ ಹೋಲಿಕೆ  

“ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣದಂಡನೆಯಾಗಬೇಕು.


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.


ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದರು.


ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.


ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.


ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.


ಪಶುಪ್ರಾಣಿಯನ್ನು ಕೊಂದವನಿಗೆ ಅದಕ್ಕೆ ಬದಲಾಗಿ ಈಡುಕೊಡಬೇಕು; ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.


“ಆದರೆ ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅಂಥವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನಿಗೆ ಮರಣಶಿಕ್ಷೆಯಾಗಬೇಕು.


ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಕಲ್ಲಿನಿಂದ ಮತ್ತೊಬ್ಬನನ್ನೂ ಹೊಡೆದುಕೊಂದರೆ ಅವನೂ ನರಹತ್ಯಗಾರನೇ; ಅಂಥವನಿಗೂ ಮರಣಶಿಕ್ಷೆಯಾಗಬೇಕು.


ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧದಿಂದ ಮತ್ತೊಬ್ಬನನ್ನು ಹೊಡೆದುಕೊಂದರೆ ಅವನೂ ನರಹತ್ಯಗಾರನೇ. ಅಂಥವನಿಗೂ ಮರಣಶಿಕ್ಷೆಯಾಗಬೇಕು.


ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.


“ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ


ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.


ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.


ಆದರೆ ನಾಡಿನ ಜನರು ಅರಸ ಆಮೋನನಿಗೆ ವಿರುದ್ಧ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು