Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:13
27 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?”


ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ.


ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.


ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.


ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು