ಆಮೋಸ 1:2 - ಕನ್ನಡ ಸತ್ಯವೇದವು C.L. Bible (BSI)2 ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.” ಅಧ್ಯಾಯವನ್ನು ನೋಡಿ |