Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:5 - ಕನ್ನಡ ಸತ್ಯವೇದವು C.L. Bible (BSI)

5 ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ದಮಸ್ಕದ ಲಾಳವಂಡಿಗೆಯನ್ನು ಮುರಿದು ಆವೆನ್ ತಗ್ಗಿನೊಳಗಿಂದ ಸಿಂಹಾಸನಾಸೀನನನ್ನೂ ಬೇತ್ ಎದೆನಿನಿಂದ ರಾಜದಂಡಧಾರಿಯನ್ನೂ ನಿರ್ಮೂಲಮಾಡುವೆನು; ಅರಾಮ್ಯರು ಕೀರಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:5
14 ತಿಳಿವುಗಳ ಹೋಲಿಕೆ  

ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?


ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.


ಅದು ಇರಿಯಲಿ ಕೊಚ್ಚಿಕೊಳ್ಳುವವರನ್ನು ಬಯಲಿಗೆಳೆಯಲಿ ಅವರ ಬುದ್ಧಿಹೀನತೆಯನ್ನು ಸಂಹರಿಸಲಿ ಆ ಬಾಬಿಲೋನಿನ ಶೂರರನ್ನು ಬೆಬ್ಬರಬೀಳುವಂತಾಗಿಸಲಿ ಅವರೆಲ್ಲರನ್ನು.


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು.


ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು,


ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ಓನಿನ ಮತ್ತು ಪೀಬೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು