Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಇಂತೆನ್ನುತ್ತಾರೆ: “ಮೋವಾಬಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇಂತೆನ್ನುತ್ತಾನೆ - ಮೋವಾಬು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಎದೋವಿುನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:1
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು