Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:11 - ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ಪುತ್ರರಲ್ಲಿ ಕೆಲವರನ್ನು ಪ್ರವಾದಿಗಳನ್ನಾಗಿ, ನಿಮ್ಮ ಯುವಜನರಲ್ಲಿ ಕೆಲವರನ್ನು ನಾಜೀರರನ್ನಾಗಿ ಸಿದ್ಧಪಡಿಸಿದವನು ನಾನೇ. ಇಸ್ರಯೇಲಿನ ಜನರೇ, ಇದು ನಿಜವಲ್ಲವೇ? ನೀವೇ ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಸಿದ್ಧಪಡಿಸಿದೆನು. ಇಸ್ರಾಯೇಲ್ಯರೇ, ಇದು ಸತ್ಯವಲ್ಲವೋ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:11
34 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.


ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.


ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಕೂಡಲೆ ಆ ಪ್ರವಾದಿ ಕಣ್ಣುಗಳ ಮೇಲಿನಿಂದ ರುಮಾಲನ್ನು ತೆಗೆದನು. ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಯೇಲರ ಅರಸನಿಗೆ ಗೊತ್ತು ಆಯಿತು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, “ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಬೋಧಿಸಕೂಡದು,” ಎಂದು ಕಟ್ಟಪ್ಪಣೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು