Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:12 - ಕನ್ನಡ ಸತ್ಯವೇದವು C.L. Bible (BSI)

12 “ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವೋ ಆ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಸಿದಿರಿ; ಪ್ರವಾದಿಗಳಿಗೆ ಪ್ರವಾದನೆ ಮಾಡಬೇಡಿರೆಂದು ಕಟ್ಟುಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:12
8 ತಿಳಿವುಗಳ ಹೋಲಿಕೆ  

ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


“ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾದುದು ಇದು - ಯಾವ ಗಂಡಸೇ ಆಗಲಿ, ಹೆಂಗಸೇ ಆಗಲಿ ನಾಜೀರರ ವ್ರತವನ್ನು ಅಂದರೆ ಸರ್ವೇಶ್ವರನಿಗೆ ತನ್ನನ್ನೇ ಪ್ರತಿಷ್ಠಿಸಿಕೊಳ್ಳುವ ವಿಶೇಷ ವ್ರತವನ್ನು ಕೈಗೊಂಡಾಗ


ರೇಕಾಬನ ಆ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, ‘ದ್ರಾಕ್ಷಾರಸವನ್ನು ಕುಡಿಯಿರಿ’ ಎಂದು ಹೇಳಿದೆನು.


ದ್ರಾಕ್ಷಾರಸವನ್ನು ಹಾಗೂ ಮದ್ಯಪಾನವನ್ನು ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣಗಿದ ದ್ರಾಕ್ಷಿಹಣ್ಣನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು