Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:4
53 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;


ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀವು ನಿಮ್ಮ ದಾಸ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.


ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


“ಜುದೇಯವೇ, ನೀನು ಮಾಡುವ ದುಷ್ಕೃತ್ಯಗಳಿಗೆ ತಕ್ಕ ಸುಗ್ಗಿ ಕಾದಿದೆ.


ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ನೀನು ನನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿರುವೆ. ಚಾಡಿಕೋರರು ನಿನ್ನಲ್ಲಿ ರಕ್ತ ಹರಿಸಿದ್ದಾರೆ;


“ಇಸ್ರಯೇಲ್ ವಂಶದವರಿಗೆ ಹೀಗೆ ಹೇಳು: - ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಅಪವಿತ್ರಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.


ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ, ಅವುಗಳಿಗೆ ಅಡ್ಡಬಿದ್ದು ಧೂಪಾರತಿ ಎತ್ತುತ್ತಿದ್ದನು.


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು