Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:7 - ಕನ್ನಡ ಸತ್ಯವೇದವು C.L. Bible (BSI)

7 ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಡವನು ತಲೆಯ [ಮೇಲೆ ಎರಚಿಕೊಂಡ] ನೆಲದ ದೂಳನ್ನೂ ಆತುರವಾಗಿ ಆಶಿಸುತ್ತಾರೆ; ದೀನರ ದಾರಿಗೆ ಅಡ್ಡಿಹಾಕುತ್ತಾರೆ; ಮಗನೂ ತಂದೆಯೂ ಒಬ್ಬಳಲ್ಲೇ ಹೋಗಿ ನನ್ನ ಪವಿತ್ರನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:7
24 ತಿಳಿವುಗಳ ಹೋಲಿಕೆ  

ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯೊಡನೆ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗ ಮಾಡಿದ್ದಾನೆ.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ,


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.


ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.


“ಸೊಸೆಯನ್ನು ಸಂಗಮಿಸಬಾರದು; ಆಕೆ ಮಗನ ಹೆಂಡತಿ.


“ಮಲತಾಯಿಯನ್ನು ಸಂಭೋಗಿಸಬಾರದು; ಹಾಗೆ ಮಾಡಿದರೆ ತಂದೆಗೆ ಮಾನಭಂಗವಾಗುವುದು. ಆಕೆ ನಿನ್ನ ತಂದೆಯ ಅರ್ಧಾಂಗಿ.


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು