12 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.
12 ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”
12 ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”
12 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”
ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.
ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.
ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.
ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!
ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.
ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.
ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.
ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.
ಆ ದಿನದಂದು ಜನರು ತಮ್ಮ ಕೈಯಿಂದ ಕಟ್ಟಿದ ಬಲಿಪೀಠಗಳನ್ನಾಗಲೀ, ಬೆರಳುಗಳಿಂದ ನಿರ್ಮಿಸಿದ ಆಶೇರಾ ದೇವತೆಯ ಸ್ತಂಭಗಳನ್ನಾಗಲೀ, ಧೂಪವೇದಿಕೆಗಳನ್ನಾಗಲೀ ಪೂಜಿಸದೆ ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ, ಇಸ್ರಯೇಲಿನ ಪರಮಪಾವನ ಸ್ವಾಮಿಯ ಕಡೆ ತಿರುಗಿಕೊಳ್ಳುವರು.