Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:4 - ಕನ್ನಡ ಸತ್ಯವೇದವು C.L. Bible (BSI)

4 ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೇಟೆಯಿಲ್ಲದೆ ಸಿಂಹವು ಅರಣ್ಯದಲ್ಲಿ ಗರ್ಜಿಸುವದೋ? ಏನೂ ಹಿಡಿದುಕೊಂಡಿರದೆ ಪ್ರಾಯದ ಸಿಂಹವು ಗವಿಯಲ್ಲಿ ಗುರುಗುಟ್ಟುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:4
7 ತಿಳಿವುಗಳ ಹೋಲಿಕೆ  

“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II


ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?


ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು