ಆಮೋಸ 3:9 - ಕನ್ನಡ ಸತ್ಯವೇದವು C.L. Bible (BSI)9 ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಷ್ಡೋದಿನ ಅರಮನೆಗಳಲ್ಲಿಯೂ ಐಗುಪ್ತದೇಶದ ಸೌಧಗಳಲ್ಲಿಯೂ ಹೀಗೆ ಪ್ರಕಟಿಸಿರಿ - ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ, ಪಟ್ಟಣದೊಳಗೆ ಎಷ್ಟೆಷ್ಟೋ ಗದ್ದಲಗಳೂ ಹಿಂಸೆಗಳೂ ನಡೆಯುತ್ತವೆ ನೋಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.” ಅಧ್ಯಾಯವನ್ನು ನೋಡಿ |