ಆಮೋಸ 4:13 - ಕನ್ನಡ ಸತ್ಯವೇದವು C.L. Bible (BSI)13 ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು. ಅಧ್ಯಾಯವನ್ನು ನೋಡಿ |