Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:2 - ಕನ್ನಡ ಸತ್ಯವೇದವು C.L. Bible (BSI)

2 “ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು - ಇಗೋ, ನಿಮ್ಮನ್ನು ಕೊಂಡಿಗಳಿಂದಲೂ ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:2
11 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ಮಾಡಿರುವೆ ಪ್ರಮಾಣ ನನ್ನ ಪವಿತ್ರತೆಯ ಮೇಲೆ I ಸುಳ್ಳಾಡಲಾರೆ ದಾವೀದನಿಗೀ ವಿಷಯದ ಮೇಲೆ II


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.


ಇಗೋ, ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ, ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆಯುವೆನು. ಅಶ್ವಾರೂಢರು, ಖೇಡ್ಯಪ್ರಾಣಿಗಳು, ಎಲ್ಲ ವಿಚಿತ್ರಾಂಬರು ಹಾಗು ಖಡ್ಗಹಸ್ತರು ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು,


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು