Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:4 - ಕನ್ನಡ ಸತ್ಯವೇದವು C.L. Bible (BSI)

4 ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿನಲ್ಲಿ ನೆರೆದು ದ್ರೋಹವನ್ನು ಇನ್ನೂ ಹೆಚ್ಚಿಸಿರಿ; ಪ್ರತಿದಿನ ಬೆಳಿಗ್ಗೆ ನಿಮ್ಮ ಯಜ್ಞಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:4
16 ತಿಳಿವುಗಳ ಹೋಲಿಕೆ  

“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ.


ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ಯೇಸು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಿರುವಿರಾ? ಸಾಕು, ಸಮಯವು ಸಮೀಪಿಸಿತು;


ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು.


ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.


ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.


“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು