Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:5 - ಕನ್ನಡ ಸತ್ಯವೇದವು C.L. Bible (BSI)

5 ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:5
19 ತಿಳಿವುಗಳ ಹೋಲಿಕೆ  

ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?


“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು