Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:6 - ಕನ್ನಡ ಸತ್ಯವೇದವು C.L. Bible (BSI)

6 “ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಊರುಗಳಲ್ಲೆಲ್ಲಾ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೂ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:6
31 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


“ಹೊಲದಲ್ಲಿ ನೀವು ಎಷ್ಟು ಬೀಜ ಬಿತ್ತಿದರೂ ಮಿಡತೆಯ ದಂಡುಬಂದು ಅದನ್ನು ತಿಂದುಬಿಡುವುದು; ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು;


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.


“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ತಲೆಬಾಗದೆ ನನಗೆ ವಿರೋಧವಾಗಿ ನಡೆದರೆ


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


“ಅವರು ನನ್ನ ಬಳಿಗೆ ಬಾರದ ಕಾರಣ, ಇಸ್ರಯೇಲ್ ಈಜಿಪ್ಟಿಗೆ ಹಿಂದಿರುಗುವುದು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು