Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:7 - ಕನ್ನಡ ಸತ್ಯವೇದವು C.L. Bible (BSI)

7 “ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:7
27 ತಿಳಿವುಗಳ ಹೋಲಿಕೆ  

ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಇಸ್ರಯೇಲರು ವಾಸವಾಗಿದ್ದ ಗೋಷೆನ್ ಪ್ರಾಂತ್ಯದಲ್ಲಿ ಮಾತ್ರ ಆ ಮಳೆ ಬೀಳಲಿಲ್ಲ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಆ ಮೂರು ದಿವಸ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ; ತಾವಿದ್ದ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಯೇಲರೆಲ್ಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕಿತ್ತು.


ಇಸ್ರಯೇಲರ ಪಶುಪ್ರಾಣಿಗಳಿಗೂ ಈಜಿಪ್ಟಿನವರ ಪಶುಪ್ರಾಣಿಗಳಿಗೂ ಆತನು ವ್ಯತ್ಯಾಸಮಾಡುವನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯುವುದಿಲ್ಲವೆಂದು ಹೇಳು.


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.


ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.


ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಮೋಶೆ ಆಕಾಶದತ್ತ ಕೈಚಾಚಿದಾಗ ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.


ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು