ಆಮೋಸ 4:8 - ಕನ್ನಡ ಸತ್ಯವೇದವು C.L. Bible (BSI)8 ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.