Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:9 - ಕನ್ನಡ ಸತ್ಯವೇದವು C.L. Bible (BSI)

9 “ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮನ್ನು ಬೂದಿಯಿಂದಲೂ ಬಿಸಿಗಾಳಿಯಿಂದಲೂ ಬಾಧಿಸಿದೆನು; ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷೆಯ ತೋಟ, ಅಂಜೂರದ ಗಿಡ, ಎಣ್ಣೆಯ ಮರ, ಇವುಗಳನ್ನು ವಿುಡತೆಯು ತಿಂದುಬಿಟ್ಟಿತು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:9
21 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ


ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿದೆ; ನನ್ನ ಅಂಜೂರದ ಗಿಡವನ್ನು ಸೀಳಿಹಾಕಿದೆ; ಅದರ ತೊಗಟೆಗಳನ್ನು ಸುಲಿದು ಬಿಸಾಡಿಬಿಟ್ಟಿದೆ; ಅದರ ರೆಂಬೆಗಳು ಬಿಳಿಚಿಕೊಂಡಿವೆ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬೆಳೆಗೆ ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೆಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆಯುಂಟಾದರೆ


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,


ನಿಮ್ಮ ಗಿಡಮರಗಳೂ ಪಚ್ಚೆಪೈರುಗಳೂ ಮಿಡತೆಯ ಪಾಲಾಗುವುವು.


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


“ಅವರು ನನ್ನ ಬಳಿಗೆ ಬಾರದ ಕಾರಣ, ಇಸ್ರಯೇಲ್ ಈಜಿಪ್ಟಿಗೆ ಹಿಂದಿರುಗುವುದು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವುದು.


“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು