Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:12 - ಕನ್ನಡ ಸತ್ಯವೇದವು C.L. Bible (BSI)

12 ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:12
39 ತಿಳಿವುಗಳ ಹೋಲಿಕೆ  

ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಪ್ರಬಲವಾಗಿದ್ದವರಲ್ಲಿ ಧೀರನಾದವನು ಸಹ ನಗ್ನನಾಗಿ ಪಲಾಯನ ಮಾಡುವನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಇಳೆಯ ಸೆರೆಯಾಳುಗಳನ್ನು ತುಳಿದುಬಿಡುವುದನ್ನೂ


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;


‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II


ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”


ನಾನು ಅವರ ಅಧಿಪತಿಯನ್ನು ಕೊಂದು, ರಾಜ್ಯಾಧಿಕಾರಿಗಳನ್ನು ಸಂಹರಿಸುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ,


ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;


ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು