Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:13 - ಕನ್ನಡ ಸತ್ಯವೇದವು C.L. Bible (BSI)

13 ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:13
17 ತಿಳಿವುಗಳ ಹೋಲಿಕೆ  

ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


“ಯಾರೂ ಪ್ರತಿಭಟಿಸದಿರಲಿ, ಯಾರೂ ಜನರನ್ನು ಖಂಡಿಸದಿರಲಿ. ನನ್ನ ಆಪಾದನೆ ಇರುವುದು, ಎಲೈ ಯಾಜಕರೇ, ನಿಮ್ಮ ಮೇಲೆಯೇ.


ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.


ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.


ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.


ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಏನನ್ನೂ ಹೇಳದೆ ಸುಮ್ಮನಿದ್ದರು.


ಉತ್ತರ ಕೊಡಲಾಗದೆ ಇವರು ಮೌನದಿಂದಿರಲು ನಾನಿನ್ನೂ ಸುಮ್ಮನೆ ಕಾದುಕೊಂಡಿರಲಾಗದು.


ಅಹುದಹುದು ಕಿವಿ ಕೇಳಿಸದವನಂತಿದ್ದೆ I ಪ್ರತ್ಯುತ್ತರ ಕೊಡಲಾಗದವನಂತಿದ್ದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು